Advertisements

ಕಾಂಗ್ರೆಸ್‌ ಸೋತರೆ ಐದು ಗ್ಯಾರಂಟಿ ಯೋಜನೆ ರದ್ದಾಗಬಹುದು: ಎಚ್.ಸಿ.ಬಾಲಕೃಷ್ಣ

ರಾಮನಗರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತರೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಜಾರಿಗೆ ತಂದಿ ರುವ ಐದು ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೆ ನೀಡಿ ದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲದಿದ್ದರೆ ಜನರಿಗೆ ಗ್ಯಾರಂಟಿಗಳು ಇಷ್ಟವಿಲ್ಲ ಎಂಬ ಅರ್ಥ ಬರುತ್ತದೆ. ಹೀಗಾಗಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು‌ ಎಂದು ಹೇಳಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಒಳಿತಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸು ತ್ತೇವೆ. ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಹೇಳಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Leave a Comment

Advertisements

Recent Post

Live Cricket Update