Advertisements

ಜ್ಞಾನವಾಪಿ ಮಸೀದಿ ಆವರಣದಲ್ಲಿ ಪೂಜೆ ಮಾಡಬಹುದು: ವಾರಾಣಸಿ ಜಿಲ್ಲಾ ಕೋರ್ಟ್

ವಾರಾಣಸಿ: ಕಾಶಿ ವಿಶ್ವನಾಥ ದೇಗುಲದ ಸನಿಹ ಇರುವ ಜ್ಞಾನವಾಪಿ ಮಸೀದಿ ಆವರಣದಲ್ಲಿ ಹಿಂದೂಗಳು ಕೂಡ ಪೂಜೆ ಮಾಡಬಹುದು ಎಂದು ವಾರಾಣಸಿ ಜಿಲ್ಲಾ ಕೋರ್ಟ್​ ಆದೇಶ ನೀಡಿದೆ.

ಸೋಮನಾಥ್​ ಅವರ ಕುಟುಂಬವು 1993ರವರೆಗೆ ಪೂಜೆ ಸಲ್ಲಿಸುತ್ತಿತ್ತು. ರಾಜ್ಯ ಸರ್ಕಾರದ ಆದೇಶದ ನಂತರ ನೆಲಮಾಳಿಗೆ ಯಲ್ಲಿ ಪೂಜೆ ನಿಲ್ಲಿಸಲಾಗಿತ್ತು.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಮಸೀದಿ ಆವರಣದಲ್ಲಿ ನಡೆಸಿದ ವೈಜ್ಞಾನಿಕ ಸಮೀಕ್ಷೆಯ ಸಮಯ ದಲ್ಲಿ ನೆಲಮಾಳಿಗೆಯನ್ನು ಸ್ವಚ್ಛಗೊಳಿಸಲಾಗಿದೆ. ಜ.17 ರಂದು ವ್ಯಾಸ್ ಅವರ ನೆಲಮಾಳಿಗೆಯನ್ನು ಜಿಲ್ಲಾಡಳಿತ ಸ್ವಾಧೀನಪಡಿಸಿಕೊಂಡಿತ್ತು. ಇದೀಗ ಕೋರ್ಟ್​ ಆದೇಶ ಹಿಂದೂ ಗಳ ಪರ ಬಂದಿದೆ.

ಏಳು ದಿನಗಳಲ್ಲಿ ಪೂಜೆ ಪ್ರಾರಂಭವಾಗಲಿದೆ. ಪ್ರತಿಯೊಬ್ಬರಿಗೂ ಪೂಜೆ ಮಾಡುವ ಹಕ್ಕಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿ ದ್ದಾರೆ. ಅಂಜುಮನ್ ಇಂತೆಜಾಮಿಯಾ ಮಸ್ಜಿದ್​ ಸಮಿತಿಯ ವಕೀಲ ಅಖ್ಲಾಕ್ ಅಹ್ಮದ್ ಅವರು ಈ ಆದೇಶವನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸು ವುದಾಗಿ ಹೇಳಿದ್ದಾರೆ.

ಮಸೀದಿ ನಿರ್ಮಾಣಕ್ಕೂ ಮೊದಲು ಇಲ್ಲಿ ದೊಡ್ಡ ಹಿಂದೂ ದೇವಾಲಯ ಅಸ್ತಿತ್ವದಲ್ಲಿತ್ತು ಎಂದು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್‌ಐ) ವರದಿ ಹೇಳಿದ ನಂತರ ಮಸೀದಿಯ ಮುಚ್ಚಿದ ಭಾಗದಲ್ಲಿ ಉತ್ಖನನ ಮತ್ತು ವೈಜ್ಞಾನಿಕ ಸಮೀಕ್ಷೆ ಕೋರಿ ನಾಲ್ವರು ಹಿಂದೂ ಮಹಿಳೆಯರು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅದಾದ ಒಂದು ದಿನದ ನಂತರ ಜಿಲ್ಲಾ ನ್ಯಾಯಾಲಯದ ಆದೇಶ ಬಂದಿದೆ.

Leave a Comment

Advertisements

Recent Post

Live Cricket Update