ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಚಿನ್ನ ಜಪ್ತಿ ಮಾಡಿಕೊಂಡಿದೆ.
ಸಿಂಗಾಪುರದಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕರನ್ನು ಈ ವೇಳೆ ಬಂಧಿಸಲಾಗಿದೆ. ಬಂಧಿತನಿಂದ 47.89 ಲಕ್ಷ ಮೌಲ್ಯದ 77 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಟೋಪಿಯಲ್ಲಿ ಚಿನ್ನವನ್ನು ವೇಸ್ಟ್ ರೂಪದಲ್ಲಿ ಆರೋಪಿ ಅಡಗಿಸಿಟ್ಟಿದ್ದ ಎಂದು ಹೇಳಲಾಗುತ್ತಿದ್ದು, ಸಿಂಗಾಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ್ದ. ಆದರೆ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ ಆರೋಪಿ ಹಾಕಿಕೊಂಡಿದ್ದ ಟೋಪಿಯಲ್ಲಿ ಚಿನ್ನ ಪತ್ತೆಯಾಗಿದೆ.
ಚಿನ್ನದ ಸಮೇತ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಳೆಯ ಕೆಂಪೇ ಗೌಡ ವಿಮಾನ ನಿಲ್ದಾಣದಲ್ಲಿ ಈ ಪ್ರಕರಣ ನಡೆದಿದ್ದು, ಕೆಐಡಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.