ಮುಂಬೈ: ನಾನು ಗರ್ಭಕಂಠ ಕ್ಯಾನ್ಸರ್ ನಿಂದ ಸತ್ತಿಲ್ಲ, ನಾನಿನ್ನೂ ಜೀವಂತವಾಗಿದ್ದೇನೆ. ಜಾಗೃತಿಗಾಗಿ ಮಾಡಿದ್ದು ಅಷ್ಟೇ ಎಂದು ನಟಿ ಪೂನಂ ಪಾಂಡೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಪೂನಂ ಪಾಂಡೆ ಬದುಕಿದ್ದಾರೆ ಎಂಬ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ನಟಿ ಹುಚ್ಚಾಟಕ್ಕೆ ಕಾನೂನು ಕ್ರಮ ಕೈಗೊಳ್ಳಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಜನಾಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಜನರ ಭಾವನೆ ಜೊತೆ ಚೆಲ್ಲಾಟ ಆಡಬಾರದು. ಆಕೆ ಮಾಡಿರುವ ಹುಚ್ಚಾಟ . ಸುಳ್ಳು ಸುದ್ದಿ ಹಬ್ಬಿಸಿ ಗಿಮಿಕ್ ಮಾಡಿದ ಪೂನಂ ಪಾಂಡೆ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಟಿ ಪೂನಂಪಾಂಡೆ ಗರ್ಭಕಂಠ ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ ಎಂಬ ಸುದ್ದಿ ಎಲ್ಲರನ್ನು ಬೆಚ್ಚಿ ಬೀಳಿಸಿತ್ತು. ಆದರೆ ಇದೀಗ ಅವರು ಬದುಕಿರುವುದಾಗಿ ವರದಿಯಾಗಿದೆ.
ನಾನು ಗರ್ಭಕಂಠ ಕ್ಯಾನ್ಸರ್ ನಿಂದ ಸತ್ತಿಲ್ಲ, ಈ ಖಾಯಿಲೆಯ ಬಗ್ಗೆ ಅರಿವು ಮೂಡಿಸಲು ಹಾಗೆ ಮಾಡಿದೆ, ಕ್ಷಮೆ ಇರಲಿ ಎಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.