Advertisements

ಫೆ.5ರಿಂದ ಪೌರಾಣಿಕ ಧಾರಾವಾಹಿ ‘ರಾಮಾಯಣ’ ಮತ್ತೆ ಪ್ರಸಾರ

ವದೆಹಲಿ: ರಮಾನಂದ ಸಾಗರ್‌ ನಿರ್ದೇಶನದಲ್ಲಿ ಮೂಡಿಬಂದ ಪೌರಾಣಿಕ ಧಾರಾವಾಹಿ ‘ರಾಮಾಯಣ’ವನ್ನು ಡಿಡಿ ನ್ಯಾಷನಲ್ ವಾಹಿನಿ ಫೆ.5ರಿಂದ ಮತ್ತೆ ಪ್ರಸಾರ ಮಾಡುತ್ತಿದೆ.

ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುದಿನ ಮಧ್ಯಾಹ್ನ 12 ಗಂಟೆಗೆ ಪ್ರಸಾರ ಮಾಡುವುದಾಗಿ ಹೇಳಿದೆ.

ಧರ್ಮ, ಪ್ರೀತಿ ಮತ್ತು ಸಮರ್ಪಣಾ ಭಾವದ ಅನನ್ಯ ಸಾಹಸಗಾಥೆ… ಮತ್ತೊಮ್ಮೆ ಇಡೀ ಭಾರತದ ಅತ್ಯಂತ ಜನಪ್ರಿಯ ಕಾರ್ಯಕ್ರಮ ‘ರಾಮಾಯಣ’ ಬರಲಿದೆ ಎಂದು ಡಿಡಿ ನ್ಯಾಷನಲ್‌ ಎಕ್ಸ್‌ನಲ್ಲಿ ತಿಳಿಸಿದೆ.

80 ಮತ್ತು 90 ರ ದಶಕದಲ್ಲಿ ಪ್ರಸಾರವಾಗಿದ್ದ ಈ ಧಾರಾವಾಹಿಯಲ್ಲಿ, ಶ್ರೀರಾಮನಾಗಿ ಅರುಣ್ ಗೋವಿಲ್, ಸೀತೆಯಾಗಿ ದೀಪಿಕಾ ಚಿಖಾಲಿಯಾ ಮತ್ತು ಸಹೋದರ ಲಕ್ಷ್ಮಣನಾಗಿ ಸುನಿಲ್ ಲಹ್ರಿ ಕಾಣಿಸಿಕೊಂಡಿದ್ದಾರೆ. ದೇಶದಾದ್ಯಂತ ಜನಮನ್ನಣೆಯನ್ನೂ ಈ ಧಾರಾವಾಹಿ ಗಳಿಸಿತ್ತು.

ಕರೋನಾ ಲಾಕ್‌ಡೌನ್‌ ವೇಳೆಯೂ ರಾಮಾಯಣ ಧಾರಾವಾಹಿಯನ್ನು ಪ್ರಸಾರ ಮಾಡಲಾಗಿತ್ತು.

Leave a Comment

Advertisements

Recent Post

Live Cricket Update