Advertisements

ಆಂಗ್ಲರ ವಿರುದ್ದ ಟೀಂ ಇಂಡಿಯಾಕ್ಕೆ 106 ರನ್ ಗಳ ಅಂತರದ ಗೆಲುವು

ವಿಶಾಖಪಟ್ಟಣಂ: ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವು ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ.

ವಿಶಾಖಪಟ್ಟಣಂನಲ್ಲಿ ನಡೆದ 2ನೇ ಟೆಸ್ಟ್ ನ 2ನೇ ಇನ್ನಿಂಗ್ಸ್ ನಲ್ಲಿ ಭಾರತ ನೀಡಿದ 399 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ಇಂಗ್ಲೆಂಡ್ ತಂಡ 292 ರನ್ ಗಳಿಗೆ ಆಲೌಟ್ ಆಗುವ ಮೂಲಕ 106 ರನ್ ಗಳ ಅಂತರದಲ್ಲಿ ಸೋಲು ಕಂಡಿತು. ಆ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1ರ (Test Series) ಸಮಬಲ ಸಾಧಿಸಿದೆ.

ಮೊದಲ ಇನ್ನಿಂಗ್ಸ್ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ನಲ್ಲಿ 399 ರನ್ನುಗಳ ಬೃಹತ್ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 292 ರನ್ಗಳಿಗೆ ಸರ್ವಪತನ ಕಂಡಿತು. ಜಾಕ್ ಕ್ರಾವ್ಲೆ (73) ಹೊರತುಪಡಿಸಿ ಯಾವೊಬ್ಬ ಆಟಗಾರನೂ ಉತ್ತಮ ಪ್ರದರ್ಶನ ತೋರದ ಕಾರಣ ಇಂಗ್ಲೆಂಡ್ 292 ರನ್ನುಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.

ಭಾರತದ ಪರ ಜಸ್ಪ್ರೀತ್ ಬೂಮ್ರಾ ಹಾಗೂ ಕುಲದೀಪ್ ಯಾದವ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಉಭಯ ಇನ್ನಿಂಗ್ಸ್ ನಲ್ಲಿ 9 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಬುಮ್ರಾ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮೂರನೇ ಟೆಸ್ಟ್ ಪಂದ್ಯವು ಫೆಬ್ರವರಿ 15ರಿಂದ ಆರಂಭವಾಗಲಿದೆ.

Leave a Comment

Advertisements

Recent Post

Live Cricket Update