Advertisements

ಭಾರತದಲ್ಲಿ ಫೆ.18 ರಿಂದ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ

ನವದೆಹಲಿ: ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ (71ನೇ ಆವೃತ್ತಿಯ) ಭಾರತದಲ್ಲಿ ನಡೆಯಲಿದ್ದು, ಫೆ.18 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಸುಮಾರು ವರ್ಷಗಳ ನಂತರ ಈ ಸ್ಪರ್ಧೆ ಭಾರತದಲ್ಲಿ ಏರ್ಪಡುತ್ತಿದೆ.

1996ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತವು ಕೊನೆಯದಾಗಿ ಆಯೋಜಿಸಿತ್ತು. 

ಸ್ಪರ್ಧೆಯು ನವದೆಹಲಿಯ ಭಾರತ್ ಮಂಟಪ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯಲಿದೆ ಮತ್ತು ವಿವಿಧ ದೇಶಗಳ 120 ಸ್ಪರ್ಧಿಗಳು ಸ್ಪರ್ಧೆ ಯಲ್ಲಿ ಭಾಗವಹಿಸಲಿದ್ದಾರೆ. ಇಂದು ನಡೆದ ಸುದ್ದಿಘೋಷ್ಠಿಯಲ್ಲಿ ಪ್ರಸ್ತುತ ವಿಶ್ವ ಸುಂದರಿ ಪೋಲೆಂಡ್‌ನ ಕರೋಲಿನಾ ಬಿಲಾವ್ಸ್ಕಾ, ಮಾಜಿ ವಿಜೇತರಾದ ಟೋನಿ ಆನ್ ಸಿಂಗ್ (ಜಮೈಕಾ), ವನೆಸ್ಸಾ ಪೊನ್ಸ್ ಡಿ ಲಿಯಾನ್ (ಮೆಕ್ಸಿಕೊ), ಮಾನುಷಿ ಛಿಲ್ಲರ್ (ಭಾರತ) ಮತ್ತು ಸ್ಟೆಫನಿ ಡೆಲ್ ತಿಳಿಸಿದರು.

ಸ್ಪರ್ಧೆಯ ಉದ್ಘಾಟನಾ ಸಮಾರಂಭ ಫೆ.20 ರಂದು ನವದೆಹಲಿಯಲ್ಲಿ ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ನಡೆಯಲಿದೆ ಮತ್ತು “ಇಂಡಿಯಾ ವೆಲ್ಕಮ್ಸ್ ದಿ ವರ್ಲ್ಡ್ ಗಾಲಾ”ದೊಂದಿಗೆ ಸ್ಪರ್ಧೆ ಪ್ರಾರಂಭವಾಗುತ್ತದೆ. ಈ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯು ಮಾರ್ಚ್ 9 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುವ ಮೂಲಕ ಮುಕ್ತಾಯಗೊಳ್ಳಲಿದೆ.

Leave a Comment

Advertisements

Recent Post

Live Cricket Update