ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಅಶೋಕ್ ಚೌಹಾಣ್ ಅವರು ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
65 ವರ್ಷದ ನಾಯಕ ವಿಧಾನಸಭಾ ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರಾದ ಬಾಬಾ ಸಿದ್ದಿಕಿ ಮತ್ತು ಮಿಲಿಂದ್ ದಿಯೋರಾ ಅವರು ಪಕ್ಷವನ್ನು ತೊರೆದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಚವಾಣ್ ಅವರು ಈವರೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಭಾನುವಾರ ಚವಾಣ್ ಅವರು ಮಹಾರಾಷ್ಟ್ರದ ಎಐಸಿಸಿ ಉಸ್ತುವಾರಿ ರಮೇಶ್ ಚೆನ್ನಿತ್ತಲ ಅವರನ್ನು ಭೇಟಿಯಾಗಿ ತಮ್ಮ ಕಳವಳಗಳ ಬಗ್ಗೆ ಚರ್ಚಿಸಿದರು.