ತುಮಕೂರು : ನಗರದ ಶೇಷಾದ್ರಿಪುರಂ ಪಿಯು ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಶೇಷಾದ್ರಿ ಸಮ್ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು. ಸುಮಾರು 700 ಹಿರಿಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಾರ್ಯಕ್ರಮವನ್ನು ಶೇಷಾದ್ರಿಪುರಂನ ಧರ್ಮದರ್ಶಿ ಡಬ್ಲೂ.ಡಿ ಅಶೋಕ್ ಉದ್ಘಾಟಿಸಿ ಮಾತನಾಡಿ, ನಿಮ್ಮ ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಸುಸಂದರ್ಭ ಇದು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಅವರು ನಮ್ಮ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳಾಗಿ ದ್ದರು, ಪ್ರಕಾಶ್ ಪಡುಕೋಣೆ, ಹಿರಿಯ ನಟ ಜಗ್ಗೇಶ್ ಮತ್ತು ಅವರ ಪುತ್ರ ಕೂಡ ನಮ್ಮ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು ಎಂದು ತಿಳಿಸಿದರು.
ಶೇಷಾದ್ರಿಪುರಂ ಶಿಕ್ಷಣದತ್ತಿಯ ಧರ್ಮದರ್ಶಿ ಕೆ.ಕೃಷ್ಣಸ್ವಾಮಿ ಮಾತನಾಡಿ , ಶಿಸ್ತು ವಿದ್ಯಾರ್ಥಿಗಳ ಜೀವನದಲ್ಲಿ ಬಹು ಮುಖ್ಯ ಎಂಬುದನ್ನು ತಿಳಿಸಿದರು.
ಇದೇ ಸಂದರ್ಭದಲ್ಲಿ ವೈದ್ಯಕೀಯ ವಿಭಾಗವನ್ನು ಆಯ್ಕೆ ಮಾಡಿಕೊಂಡಿರುವ ಯಶಸ್ವಿನಿ, ತೇಜಸ್ವಿನಿ, ಹಾಗೂ ವಾಣಿಜ್ಯ ವಿಭಾಗದ ಹಿರಿಯ ವಿದ್ಯಾರ್ಥಿ ಮದ್ವೇಶ್ ಮಾತನಾಡಿ ಇಂಥ ಕಾಲೇಜಿನಲ್ಲಿ ನಾವು ಓದಿದ್ದಕ್ಕೆ ನಮಗೆ ಹೆಮ್ಮೆ ಇದೆ ಎಂಬ ಮಾತನ್ನು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಸವರಾಜು ಬಿ.ವಿ ಮಾತನಾಡಿ , ಈ ಸಂಸ್ಥೆ ಇಷ್ಟು ಉನ್ನತ ಮಟ್ಟಕ್ಕೆ ಬೆಳೆಯಲು ಈ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ನಿಮ್ಮಂತಹ ಆದರ್ಶಪ್ರಾಯ ವಿದ್ಯಾರ್ಥಿಗಳೇ ಕಾರಣ ಎಂಬುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಶ್ವೇತರಾಣಿ ಸೇರಿದಂತೆ ಹಿರಿಯ ವಿದ್ಯಾರ್ಥಿಗಳು, ಪೋಷಕರು ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.