ಬೆಂಗಳೂರು: ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ನೀಡಲು ಸರ್ಕಾರ ಒತ್ತು ನೀಡಿದ್ದು, ಹಲವಾರು ಯೋಜನೆ ಗಳನ್ನು ಹಮ್ಮಿಕೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಘೋಷಿಸಿದ್ದಾರೆ.
ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು. ಮುಂದಿನ ಸಾಲಿನಲ್ಲಿ ಒಳಿದ ಒಂಭತ್ತು ಜಿಲ್ಲೆಗಳಲ್ಲೂ ಸಹ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.
ಆನೇಕಲ್, ನೆಲಮಂಗಲ, ಹೊಸಕೋಟೆ, ಖಾನಪುರ, ಶಿರಹಟ್ಟಿ, ಎಳಂದೂರು ತಾಲೂಕುಗಳಲ್ಲಿ 100 ತಾಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಶಿಥಿಲಾವ್ಯಸ್ಥೆಯಲ್ಲಿರುವ ಆರೋಗ್ಯ ಕೇಂದ್ರವನ್ನು ಉನ್ನತೀಕರಣಕ್ಕಾಗಿ 75 ಕೋಟಿ ರೂ. ಅನುದಾನ ನೀಡಲಾಗುವುದು.