Advertisements

ಲೋಕಸಭೆ: ಕಾಂಗ್ರೆಸ್ ನಿಂದ ಮಾಧುಸ್ವಾಮಿ ಕಣಕ್ಕೆ

ತುಮಕೂರು: ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗದೆ ತೀವ್ರ ಅಸಮಾಧಾನಗೊಂಡಿರುವ ಸಮಾಜವಾದಿ ಹಿನ್ನೆಲೆಯುಳ್ಳ, ಬಿಜೆಪಿ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕಮಲ ತೊರೆದು, ಕಾಂಗ್ರೆಸ್‌ನತ್ತ ಮುಖ ಮಾಡಲು ಮುಂದಾಗಿದ್ದಾರೆ.

ಇನ್ನೆರಡು ದಿನದಲ್ಲಿ ಆಪ್ತರ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದೆಂದು ಮಾಧುಸ್ವಾಮಿ ತಿಳಿಸಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆ.ಸಿ.ಪುರದ ಮಾಧುಸ್ವಾಮಿ ಮನೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಅಶೋಕ್ ಮತ್ತಿತರ ನಾಯಕರು ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ತಿಳಿದುಬಂದಿದೆ.

ಹೊರಗಿನವರಿಗೆ ಟಿಕೆಟ್ ನೀಡಬೇಡಿ. ಹೊರಗಿನವರು ಬಂದು ಗೆದ್ದಿರುವ ಇತಿಹಾಸ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಲ್ಲವೆಂದು ನಾಯಕರಿಗೆ ಮನವರಿಕೆ ಮಾಡಿದ್ದರೂ ಸಹ ಸೋಮಣ್ಣನವರಿಗೆ ಟಿಕೆಟ್ ನೀಡಿರುವುದು ತುಂಬಾ ಬೇಸರ ಮೂಡಿಸಿದೆ. ಇಷ್ಟೆಲ್ಲಾ ಅವಮಾನ ಆದ ಮೇಲೆ ಪಕ್ಷದಲ್ಲಿ ಮುಂದಿರುವುದು ಸರಿಯಲ್ಲ ಎಂದು ಮಾಧುಸ್ವಾಮಿ ಸಭೆಯಲ್ಲಿ ತೀವ್ರ ಬೇಸರ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಅಸಮಾಧಾನಗೊಂಡಿರುವ ಮಾಧುಸ್ವಾಮಿ ಅವರನ್ನು ಕಾಂಗ್ರೆಸ್ ಮುಖಂಡರು ಸಂಪರ್ಕಿಸುವ ಪ್ರಯತ್ನ ಮಾಡಲಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಬರಲು ಒಪ್ಪಿಗೆ ಸೂಚಿಸಿದರೆ ಮುದ್ದಹನುಮೇಗೌಡರನ್ನು ಬದಲಾಯಿಸಿ ಮಾಧುಸ್ವಾಮಿ ಅವರನ್ನು ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ ಎಂಬ ರಾಜಕೀಯ ಚರ್ಚೆ ಕೇಳಿಬರುತ್ತಿದೆ. ಲೋಕಸಭೆಗೆ ಟಿಕೆಟ್‌ ಕೊಡುವುದಾದರೆ ಪಕ್ಷ ಸೇರುವುದಾಗಿ ಮಾಧು ಸ್ವಾಮಿ ಷರತ್ತು ಹಾಕಿದ್ದಾರೆ ಎನ್ನಲಾಗಿದೆ.

ಮುದ್ದಹನುಮೇಗೌಡ ಅವರಿಗೆ ಬೆಂಗಳೂರಿನ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅವಕಾಶ ಮಾಡಿಕೊಟ್ಟು, ಮಾಧುಸ್ವಾಮಿ ಅವರಿಗೆ ತುಮಕೂರು ಕ್ಷೇತ್ರದ ಟಿಕೆಟ್ ನೀಡುವ ಬಗ್ಗೆ ಚರ್ಚೆಗಳು ನಡೆದಿವೆ. ಲೋಕಸಭೆಗೆ ಟಿಕೆಟ್ ನೀಡಲು ಸಾಧ್ಯವಾಗದಿದ್ದರೆ ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡುವ ಭರವಸೆ ಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Comment

Advertisements

Recent Post

Live Cricket Update