Advertisements

ಮಹಿಳೆಯ ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ: ನಾಲ್ವರು ಮಹಿಳೆಯರ ಬಂಧನ

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಗ್ರಾಮದಲ್ಲಿ ವಿವಾದಕ್ಕೆ ಸಂಬಂಧಿಸಿ ಮಹಿಳೆಯನ್ನು ಥಳಿಸಿ, ವಿವಸ್ತ್ರ ಗೊಳಿಸಿ ಮೆರವಣಿಗೆ ಮಾಡಿದ ಆರೋಪದ ಮೇಲೆ ನಾಲ್ವರು ಮಹಿಳೆಯರನ್ನು ಬಂಧಿಸಲಾಗಿದೆ.

ಹೋಳಿ ಆಚರಣೆಯ ಸಮಯದಲ್ಲಿ ಸಂಭವಿಸಿದ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಗೌತಮಪುರ ಪೊಲೀಸ್ ಠಾಣೆ ಪ್ರದೇಶದ ಬಚೋರಾ ಗ್ರಾಮದಲ್ಲಿ ನಾಲ್ವರು ಮಹಿಳೆಯರು ಸಂತ್ರಸ್ತೆಯನ್ನು ಬಲವಂತವಾಗಿ ಮನೆಯಿಂದ ಹೊರಗೆಳೆದು, ಥಳಿಸಿ, ಸಾರ್ವಜನಿಕವಾಗಿ ಬೆತ್ತಲೆಗೊಳಿಸಿ ಅವಮಾನಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಸುನಿಲ್ ಮೆಹ್ತಾ ತಿಳಿಸಿದ್ದಾರೆ.

ಅವಮಾನದಿಂದಾಗಿ, ಸಂತ್ರಸ್ತೆ ತನ್ನ ಹೆತ್ತವರ ಮನೆಗೆ ಹೋಗಿದ್ದಳು ಎಂದು ಹೇಳಿದರು. ಸಂತ್ರಸ್ತೆ ಮತ್ತು ಆರೋಪಿ ಮಹಿಳೆಯರು ಪರಿಶಿಷ್ಟ ಜಾತಿ (ಎಸ್ಸಿ) ವರ್ಗಕ್ಕೆ ಸೇರಿದವರು. ಸಂತ್ರಸ್ತೆ ತನ್ನ ಅತ್ತೆಯನ್ನು ತನ್ನ ವಿರುದ್ಧ ಪ್ರಚೋದಿಸುತ್ತಿದ್ದಾಳೆ ಎಂದು ಆರೋಪಿ ಗಳಲ್ಲಿ ಒಬ್ಬರು ಆರೋಪಿಸಿದ್ದಾರೆ.

ವರದಿಯ ಪ್ರಕಾರ, ಗ್ರಾಮದ ಕೆಲವು ಜನರು ಅವಮಾನಕರ ಕೃತ್ಯದ ವೀಡಿಯೊವನ್ನು ಚಿತ್ರೀಕರಿಸಿ ಅದನ್ನು ಪ್ರಸಾರ ಮಾಡಿ ದ್ದಾರೆ. ಆರೋಪಿ ಮಹಿಳೆಯರು ಸಂತ್ರಸ್ತೆಯನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗಿ ವಿವಸ್ತ್ರಗೊಳಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆ ಕ್ಷಮಿಸುವಂತೆ ಬೇಡಿಕೊಂಡರೂ ಆರೋಪಿಗಳು ಬಿಡದೇ ಆಕೆಯ ಬಟ್ಟೆಗಳನ್ನು ಹರಿದು ಹಾಕುವ ಮೂಲಕ ಬಹಿರಂಗವಾಗಿ ಅವಳನ್ನು ವಿವಸ್ತ್ರಗೊಳಿಸಿದರು ಎಂದು ವರದಿ ತಿಳಿಸಿದೆ.

 

Leave a Comment

Advertisements

Recent Post

Live Cricket Update