ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಮಂಗಳವಾರ 48 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 448ಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 30 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 48 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದನ್ನು ಓದಿ: ರಾಜ್ಯದಲ್ಲಿ ಇಂದು ಕೊರೋನಾದಿಂದ ಒಬ್ಬರು ಸಾವು; 161 ಮಂದಿಗೆ ಪಾಸಿಟಿವ್
ಇಂದು ಕೋವಿಡ್ ನಿಂದ 127 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 5750 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 0.83 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿತರಲ್ಲಿ 423 ಮಂದಿ ಮನೆ ಆರೈಕೆಗೆ ಒಳಗಾದರೆ, 20 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐದು ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
#COVID19 Media Bulletin – 23/01/2024 pic.twitter.com/a3nxnOueSA
— K’taka Health Dept (@DHFWKA) January 23, 2024