Advertisements

ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ನೌಕರರನ್ನು ತಕ್ಷಣವೇ ಕರ್ತವ್ಯದಿಂದ ಬಿಡುಗಡೆಗೊಳಿಸಿ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮತ್ತು ಸಚಿವಾಲಯದಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿ ಹಾಗೂ ನೌಕರರನ್ನು ತಕ್ಷಣವೇ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರ ಮಂಗಳವಾರ  ಆದೇಶ ಹೊರಡಿಸಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಈ ಆದೇಶ ಹೊರಡಿಸಿದ್ದು, ನಿವೃತ್ತ ನೌಕರರಿಂದ ತೆರವಾಗುವ ಹುದ್ದೆಗೆ ಹಾಲಿ ಸರ್ಕಾರಿ ಅಧಿಕಾರಿಗಳು, ನೌಕರರನ್ನೇ ನಿಯೋಜಿಸುವಂತೆ ಸೂಚಿಸಿದ್ದಾರೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನಿವೃತ್ತ ಸರ್ಕಾರಿ ನೌಕರರನ್ಜು ತಕ್ಷಣ ಕರ್ತವ್ಯದಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು.

ಇದನ್ನೂ ಓದಿ: ಫ್ಯಾಸಿಸ್ಟ್ ಶಕ್ತಿಗಳ ಹೆಚ್ಚಳದ ಆತಂಕ: ವಿದ್ಯಾರ್ಥಿಗಳಿಗೆ ಗಾಂಧೀಜಿ ಪ್ರಬಂಧ ಸ್ಪರ್ಧೆ ಆಯೋಜಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರ ಕೆಲವು ಇಲಾಖೆಗಳಲ್ಲಿ ಮತ್ತು ಸಚಿವಾಲಯದಲ್ಲಿ ಅನಗತ್ಯ ಹುದ್ದೆಗಳನ್ನು ಸೃಷ್ಟಿಸಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ನೌಕರರನ್ನು ಸಮಾಲೋಚಕರು, ವಿಶೇಷ ಸಂಪನ್ಮೂಲ ವ್ಯಕ್ತಿಗಳಾಗಿ ನೇಮಿಸಿಕೊಳ್ಳಲಾಗಿದೆ. ಗ್ರೂಪ್ ವೃಂದದ ಕೆಲವು ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಹೀಗೆ ನೇಮಿಸಿಕೊಂಡ ನಿವೃತ್ತ ನೌಕರರಿಗೆ ವೇತನ, ವಾಹನ ಸೇರಿದಂತೆ ಮತ್ತಿರ ಸೌಲಭ್ಯ ನೀಡಲಾಗುತ್ತಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಆಗುತ್ತಿದೆ. ಅಲ್ಲದೇ ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ ಎಂದು ಮುಖ್ಯ ಕಾರ್ಯದರ್ಶಿಗೆ ಬರೆದ ಟಿಪ್ಪಣಿಯಲ್ಲಿ ಸಿಎಂ ಸಿದ್ದರಾಮಯ್ಯ ಉಲೇಖಿಸಿದ್ದರು.

Source link

Leave a Comment

Advertisements

Recent Post

Live Cricket Update