Advertisements

ಮದ್ಯ ಸೇವಿಸಿ ಚಾಲನೆ; 16 ಶಾಲಾ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು- Kannada Prabha

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ 16 ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಅಭಿಯಾನದಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸರು ಬೆಳಿಗ್ಗೆ 7 ರಿಂದ 9.30ರ ನಡುವೆ 3,414 ಶಾಲಾ ವಾಹನ ಚಾಲಕರನ್ನು ಪರೀಕ್ಷಿಸಲಾಗಿದ್ದು ಈ ವೇಳೆ 16 ಶಾಲಾ ವಾಹನ ಚಾಲಕರು ಮದ್ಯ ಸೇವಿಸಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಶ್ರೀರಾಮನ ಮೆರವಣಿಗೆ ವೇಳೆ ಗಲಾಟೆ: ವಾಡಿ ಪಟ್ಟಣದಲ್ಲಿ ನಿಷೇಧಾಜ್ಞೆ!

ಕುಡುಕ ಚಾಲಕರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 ಮತ್ತು ಮೋಟಾರು ವಾಹನ ಕಾಯ್ದೆ185ರ (ಕುಡಿದು ವಾಹನ ಚಲಾವಣೆ) ಅಡಿಯಲ್ಲಿ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ ಎನ್ ಅನುಚೇತ್ ತಿಳಿಸಿದ್ದಾರೆ.

ಸಂಬಂಧಪಟ್ಟ ಚಾಲಕರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಆಯಾ ಆರ್‌ಟಿಒಗಳಿಗೆ ಕಳುಹಿಸಲಾಗಿದೆ ಎಂದು ಅನುಚೇತ್ ಹೇಳಿದರು.

Source link

Leave a Comment

Advertisements

Recent Post

Live Cricket Update