Advertisements

ಶ್ರೀರಾಮನ ಮೆರವಣಿಗೆ ವೇಳೆ ಗಲಾಟೆ; ವಾಡಿ ಪಟ್ಟಣದಲ್ಲಿ ನಿಷೇಧಾಜ್ಞೆ!- Kannada Prabha

ಕಲಬುರಗಿ: ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದಲ್ಲಿ ಶ್ರೀರಾಮನ ಮೆರವಣಿಗೆ ವೇಳೆ ನಡೆದ ಜಗಳದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ಜನವರಿ 25ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದಿದ್ದು ನಂತರ ಕಲ್ಲು ತೂರಾಟ ನಡೆಸಿದ್ದರಿಂದ ಪರಿಸ್ಥಿತಿ ಉಲ್ಬಣಗೊಂಡಿತ್ತು. ನಂತರ ಪೊಲೀಸರು ಮಧ್ಯಪ್ರವೇಶಿಸಿ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆದಿದ್ದರು.

ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮೆರವಣಿಗೆ ನಡೆಸಲಾಗಿತ್ತು. ಇದು ಕೇವಲ ಜಗಳವಾಗಿದ್ದರಿಂದ ಪರಿಸ್ಥಿತಿಯನ್ನು ಶೀಘ್ರವಾಗಿ ಹತೋಟಿಗೆ ತರಲಾಯಿತು. ಪ್ರದೇಶದಲ್ಲಿ ಯಾವುದೇ ಉದ್ವಿಗ್ನತೆ ಇಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ, ವಾಡಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಚಿತ್ತಾಪುರ ತಾಲೂಕು ಜನವರಿ 25ರ ಬೆಳಗ್ಗೆ 6ರವರೆಗೆ ಜಾರಿಯಲ್ಲಿರುತ್ತದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಅಪಾರ ಜನಸ್ತೋಮ, ಭಕ್ತರ ತಳ್ಳಾಟ, ನೂಕಾಟ: ಮಧ್ಯಾಹ್ನ 2.30ರವರೆಗೆ ರಾಮ ಮಂದಿರ ಬಾಗಿಲು ಮುಚ್ಚಿದ ಪೊಲೀಸರು

ಈ ಮಧ್ಯೆ, ಕಲಬುರಗಿ ನಗರದ ಹೊರವಲಯದ ಕೊಟ್ನೂರು ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸಿರುವುದನ್ನು ಖಂಡಿಸಿ ವಿವಿಧ ದಲಿತ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದ ನಂತರ ಜಿಲ್ಲೆಯ ಹಲವೆಡೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ಕಿಡಿಗೇಡಿಗಳು ಅಂಬೇಡ್ಕರ್ ಪ್ರತಿಮೆಗೆ ಪಾದರಕ್ಷೆಯ ಹಾರವನ್ನು ಹಾಕಿದ್ದಾರೆ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ನಾವು ತಪ್ಪಿತಸ್ಥರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ. ಆಪಾದಿತ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಆದರೆ ನಮ್ಮ ತಂಡ ಸ್ಥಳದಲ್ಲಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ಅವರು ಹೇಳಿದರು.

Source link

Leave a Comment

Advertisements

Recent Post

Live Cricket Update