ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ-2.0 ಅವಧಿಯ ಕೊನೆಯ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ. ಈ ವೇಳೆ, ನಿರೀಕ್ಷೆ ಇಟ್ಟು ಕಾಯುತ್ತಿದ್ದ ಜನರಿಗೆ ಬೆಳಗ್ಗೆಯೇ ಶಾಕ್ ಎದುರಾ ಗಿದೆ.
ಎಲ್ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆಯಾಗಿದ್ದು, ಫೆ1ರಂದು 19-ಕೆಜಿಯ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು 14 ರೂ. ಹೆಚ್ಚಿಸಲಾಗಿದ್ದು, ಪ್ರತಿ ಸಿಲಿಂಡರ್ ಬೆಲೆ 1,755.5 ರೂಪಾಯಿ ನಿಂದ 1,769.50 ರೂಪಾಯಿಗೆ ಏರಿಕೆಯಾಗಿದೆ.
ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಮತ್ತು ಹಿಂದೂ ಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಪ್ರತಿ ತಿಂಗಳ ಮೊದ ಲನೆಯ ದಿನದಂದು ಅಡುಗೆ ಅನಿಲ ಮತ್ತು ಎಟಿಎಫ್ ಬೆಲೆಗಳನ್ನು ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಬೆಲೆಯನ್ನು ಆಧರಿಸಿ ಪರಿಷ್ಕರಿಸುತ್ತವೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಅನ್ನು ಬೆಳಗ್ಗೆ 11 ಗಂಟೆಗೆ ಮಂಡಿಸುವ ದಿನದಂದೇ ಬೆಲೆ ಏರಿಕೆ ಮಾಡಿರುವ ಬಗ್ಗೆ ಘೋಷಣೆ ಮಾಡಲಾಗಿದೆ. ವಾಣಿಜ್ಯ ಬಳಕೆಯ 19 ಕೆಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಏರಿಕೆಯಾಗಿದ್ದು, ಪರಿಷ್ಕೃತ ದರವು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ 1760.50 ರೂಪಾಯಿಗೆ ಏರಿಕೆ ಆಗಿದೆ. ಕೋಲ್ಕತ್ತದಲ್ಲಿ 1,869 ರೂಪಾಯಿನಿಂದ 1,887 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ 1,708 ರೂಪಾಯಿಯಿಂದ 1,723 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ 1,924.70 ರೂಪಾಯಿ ಯಿಂದ 1,937 ರೂಗೆ ಏರಿಕೆಯಾಗಿದೆ ಎಂದು ವರದಿಯಾಗಿದೆ.