Advertisements

16 ’ಲೋಕ’ ಕ್ಷೇತ್ರಗಳಿಗೆ ಸಮಾಜವಾದಿ ಅಭ್ಯರ್ಥಿಗಳ ಘೋಷಣೆ

ಕ್ನೋ: ಉತ್ತರ ಪ್ರದೇಶದ 16 ಲೋಕಸಭಾ ಕ್ಷೇತ್ರಗಳಿಗೆ ಅಖಿಲೇಶ್‌ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದೆ. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅಧಿಕೃತವಾಗಿ ಅಭ್ಯರ್ಥಿಗಳನ್ನ ಘೋಷಣೆ ಮಾಡಿದ್ದಾರೆ.

I.N.D.I.A ಒಕ್ಕೂಟದ ಮಿತ್ರಪಕ್ಷ ಕಾಂಗ್ರೆಸ್‌ಗೆ 11 ಸ್ಥಾನಗಳನ್ನ ಕಾಯ್ದಿರಿಸಿದೆ ಎಂದು ಹೇಳಿದ ದಿನದ ನಂತರ 16 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ.

ಅಖಿಲೇಶ್ ಪತ್ನಿ ಡಿಂಪಲ್ ಯಾದವ್ ಅವರು ಮೈನ್‌ಪುರಿಯಿಂದ ಸ್ಪರ್ಧಿಸಲಿದ್ದಾರೆ. ಶಫೀಕರ್ ರೆಹಮಾನ್ ಬಾರ್ಕ್ ಸಂಭಾಲ್‌ ಕ್ಷೇತ್ರದಿಂದ ಸ್ಪರ್ಧಿಸಿ ದ್ದರೆ, ರವಿದಾಸ್ ಮೆಹ್ರೋತ್ರಾ ಲಕ್ನೋದಿಂದ ಕಣಕ್ಕಿಳಿಯಲಿದ್ದಾರೆ. ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 11 ಒಬಿಸಿಗಳು, ಓರ್ವ ಮುಸ್ಲಿಂ, ಓರ್ವ ದಲಿತ, ಓರ್ವ ಠಾಕೂರ್, ಓರ್ವ ಟಂಡನ್ ಮತ್ತು ಓರ್ವ ಖತ್ರಿ ಅಭ್ಯರ್ಥಿಗಳಿದ್ದಾರೆ.

11 OBC ಅಭ್ಯರ್ಥಿಗಳಲ್ಲಿ ನಾಲ್ವರು ಕುರ್ಮಿ, ಮೂರು ಯಾದವ್, ಇಬ್ಬರು ಶಾಕ್ಯ, ಒಬ್ಬ ನಿಶಾದ್ ಮತ್ತು ಒಬ್ಬ ಪಾಲ್ ಸೇರಿದ್ದಾರೆ. ಬಿಹಾರದ ಮುಖ್ಯ ಮಂತ್ರಿ ನಿತೀಶ್‌ ಕುಮಾರ್‌ ಎನ್‌ಡಿಎ ಸೇರ್ಪಡೆಯಾದ ಇಂಡಿಯಾ ಒಕ್ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ.

Leave a Comment

Advertisements

Recent Post

Live Cricket Update