ಚಿತ್ರದುರ್ಗ: ಕೆಎಸ್ಆರ್ಟಿಸಿ ರಾಜಹಂಸ ಬಸ್ ಡಿಕ್ಕಿಯಾಗಿ ಟ್ರಾಕ್ಟರ್ ಪಲ್ಟಿಯಾದ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ನಡೆದಿದೆ.
ಚಲಿಸುತ್ತಿದ್ದ ಟ್ರಾಕ್ಟರ್ಗೆ ರಾಜಹಂಸ ಬಸ್ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ ಗೊಂಡಿದ್ದು, 3 ಮಂದಿ ಸ್ಥಿತಿ ಗಂಭೀರವಾಗಿದೆ. ಬೆಂಗಳೂರುನಿಂದ ಕಲಬುರಗಿಗೆ ಮದುವೆ ಟ್ರಿಪ್ ಹೋಗಿದ್ದಾಗ ಅಪಘಾತ ವಾಗಿದೆ. ರಾಜಹಂಸ ಬಸ್ನಲ್ಲಿದ್ದವರು ಮದುವೆ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾ ಗಿದೆ. ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ಗೆ ರಾಜಹಂಸ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದ್ದು, ಟ್ರಾಕ್ಟರ್ ಪಲ್ಟಿಯಾಗಿದೆ.
ಬಸ್ಸಿನಲ್ಲಿದ್ದ ಎಲ್ಲರೂ ಕೂಡಾ ಒಂದೇ ಕುಟುಂಬದವರಾಗಿದ್ದು, ಬಸ್ ಚಾಲಕರಾಜಹಂಸ ಬಸ್ ಡಿಕ್ಕಿಯಾಗಿ ಟ್ರಾಕ್ಟರ್ ಪಲ್ಟಿನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಆರೋಪಿಸಿದ್ದಾರೆ. ಘಟನೆಯಲ್ಲಿ ಗಾಯ ಗೊಂಡವರನ್ನು ಕೂಡಲೇ ಸ್ಥಳೀಯ ಚಳ್ಳಕೆರೆ ಮತ್ತು ಚಿತ್ರದುರ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.