Advertisements

ಓಹಿಯೋದಲ್ಲಿ ಭಾರತೀಯ ವಿದ್ಯಾರ್ಥಿ ಶವ ಪತ್ತೆ

ಓಹಿಯೋ: ಮೆರಿಕದ ಓಹಿಯೋ ರಾಜ್ಯದ ಸಿನ್ಸಿನಾಟಿಯಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾ ಗಿದ್ದಾನೆ. ವಿದ್ಯಾರ್ಥಿಯನ್ನು ಶ್ರೇಯಸ್ ರೆಡ್ಡಿ ಬೆನಿಗೇರಿ ಎಂದು ಗುರುತಿಸಲಾಗಿದೆ.
ಭಾರತ ಮೂಲದ ವಿದ್ಯಾರ್ಥಿಯ ಸಾವಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಹೇಳಿದ್ದಾರೆ. ರಾಯಭಾರ ಕಚೇರಿಯು ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುತ್ತಿದೆ.

ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಶ್ರೇಯಸ್ ರೆಡ್ಡಿ ಬೆನಿಗೇರಿ ಅವರ ದುರದೃಷ್ಟಕರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ‘X’ ನಲ್ಲಿ ಬರೆದಿದ್ದಾರೆ.

ಬೆನ್ನಿಗೇರಿಯ ಸಾವಿಗೆ ಕಾರಣ ತಿಳಿದಿಲ್ಲ ಆದರೆ ಒಂದು ವಾರದೊಳಗೆ ನಡೆದ ನಾಲ್ಕನೇ ಸಾವು ಇದಾಗಿದ್ದು, ಅಮೆರಿಕ ದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಕಳವಳಗೊಳಿಸಿದೆ.

ಪರ್ಡ್ಯೂ ವಿಶ್ವವಿದ್ಯಾನಿಲಯದಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ನೀಲ್ ಆಚಾರ್ಯ ಕಾಣೆಯಾದ ಒಂದು ದಿನದ ನಂತರ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದ. ಜಾರ್ಜಿಯಾದ ಲಿಥೋನಿಯಾದ ಅಂಗಡಿಯೊಂದರಲ್ಲಿ ವಿವೇಕ್ ಸೈನಿ ಎಂಬ ಇನ್ನೊಬ್ಬ ಭಾರತೀಯ ವಿದ್ಯಾರ್ಥಿಯನ್ನು ಮಾದಕ ವ್ಯಸನಿಯೊಬ್ಬ ಸುತ್ತಿಗೆಯಿಂದ ಬರ್ಬರವಾಗಿ ಹತ್ಯೆ ಮಾಡಿದ್ದ.

Leave a Comment

Advertisements

Recent Post

Live Cricket Update