ಲಡಾಖ್: ಕೇಂದ್ರಾಡಳಿತ ಪ್ರದೇಶ ಲೇಹ್, ಲಡಾಖ್ ಗೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ 6 ನೇ ಶೆಡ್ಯೂಲ್ ಅಡಿಯಲ್ಲಿ ರಕ್ಷಣೆ ನೀಡುವಂತೆ ಒತ್ತಾಯಿಸಿ ಸಾವಿರಾರು ಜನರು ಭಾನುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ಪ್ರತಿಭಟನೆಗಳನ್ನು ಲೇಹ್ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ ಜಂಟಿಯಾಗಿ ಆಯೋಜಿಸಿದ್ದು, ಸಾವಿರಾರು ಪುರುಷರು ಮತ್ತು ಮಹಿಳೆಯರು ಲೇಹ್ ಮುಖ್ಯ ನಗರದ ಮೂಲಕ ಮೆರವಣಿಗೆ ನಡೆಸಿದರು.
ಲಡಾಖ್ನ ಎರಡು ಪ್ರದೇಶಗಳನ್ನು ಪ್ರತಿನಿಧಿಸುವ LAB ಮತ್ತು KDA, ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತನೆಯಾ ದಾಗಿನಿಂದ ರಾಜ್ಯತ್ವ ಮತ್ತು ಆರನೇ ಶೆಡ್ಯೂಲ್ ಸ್ಥಾನಮಾನಕ್ಕಾಗಿ ಪ್ರತಿಪಾದಿಸುತ್ತಿವೆ.
ಪ್ರತಿಭಟನಾ ಮೆರವಣಿಗೆಯಲ್ಲಿ ಲಡಾಖ್ನ ರಾಜ್ಯತ್ವ, ಸಂವಿಧಾನದ ಆರನೇ ಶೆಡ್ಯೂಲ್ನ ಅನುಷ್ಠಾನ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಪ್ರತ್ಯೇಕ ಸಂಸದೀಯ ಸ್ಥಾನಗಳನ್ನು ಸ್ಥಾಪಿಸುವ ಘೋಷಣೆಗಳು ಮೊಳಗಿದವು.
ಆರ್ಟಿಕಲ್ 370 ಮತ್ತು 35A ರದ್ದತಿಯ ನಂತರ ಲಡಾಖ್ ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತನೆ ಯಾಗಿತ್ತು. 2019 ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾ ಗಿತ್ತು.