ಬೆಂಗಳೂರು: ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಫೆ.17ರವರೆಗೆ ಗಡುವು ನೀಡಿದೆ. ನಿಗದಿತ ಗಡುವಿನ ಒಳಗೆ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಮುಂದಾಗಿದೆ.
ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17 ಕೊನೆಯ ದಿನವಾಗಿದ್ದು, ನಿಗದಿತ ದಿನ ದೊಳಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ.
ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವ ದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.
2019 ಏಪ್ರಿಲ್ 1ಕ್ಕಿಂತ ಹಳೆಯದಾದ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್-HSRP ಹಾಕಿಸಿ ಕೊಳ್ಳುವಂತೆ ಸಾರಿಗೆ ಇಲಾಖೆ ನೀಡಿರುವ ಗಡುವು ಫೆ.17ಕ್ಕೆ ಮುಕ್ತಾಯವಾಗಲಿದೆ. ನಂಬರ್ ಪ್ಲೆಟ್ ಬದಲಾವಣೆಗೆ ಹಲವು ವಾಹನ ಮಾಲೀಕರು ಆಸಕ್ತಿ ತೋರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಿಸಿ ಮುಟ್ಟಿಸಲು ಇಲಾಖೆ ಮುಂದಾಗಿದೆ.
ಹೆಚ್ ಎಸ್ ಆರ್ ಪಿ ಅಳವಡಿಸದೇ ಮೊದಲ ಬಾರಿ ಸಿಕ್ಕಿಬಿದ್ದರೆ 1000 ರೂಪಾಯಿ ದಂಡ, 2ನೇ ಬಾರಿ ಸಿಕ್ಕಿ ಬಿದ್ದರೆ 2000 ರೂಪಾಯಿ ದಂಡ ಹಾಕಲಾಗುತ್ತದೆ.