ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಯಾವುದೇ ರೀತಿಯಾಗಿ ಈ ವಿಷಯದಲ್ಲಿ ಯೂಟರ್ನ್ ಹೊಡೆಯುವುದಿಲ್ಲ ನನ್ನ ನಿರ್ಧಾರದಲ್ಲಿ ಸ್ಪಷ್ಟತೆ ಇದೆ. ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿ ದರು. ಈ ಕಾರಣದಿಂದ ನಾನು ಮಂಡ್ಯ ಭಾಗದಲ್ಲಿ ಓಡಾಡಿದ್ದೆ ಎಂದು ತಿಳಿಸಿದರು.
ನನ್ನ ಗಮನ 28 ಕ್ಷೇತ್ರಗಳ ಮೇಲೂ ಇರುತ್ತದೆ. ನನ್ನ ಸ್ಪರ್ಧೆಗೆ ಸಹಜವಾಗಿ ಮುಖಂಡರ ಒತ್ತಾಯ ಇದೆ. ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಗೆ ಸುಮಲತ ಒತ್ತಾಯ ವಿಚಾರ ಏನೇ ಪ್ರಶ್ನೆ ಕೇಳಿದರೂ ಎಲ್ಲದಕ್ಕೂ ಕಾಲವೇ ಉತ್ತರಿಸುತ್ತದೆ ಎಂದು ತಿಳಿಸಿದರು.
ಷಾ ಭಾಗವಹಿಸಲಿದ್ದ ಕಾರ್ಯಕ್ರಮದಿಂದ ಹೆಚ್ಡಿ ಕುಮಾರಸ್ವಾಮಿ ದೂರ ಉಳಿದಿದ್ದಾರೆ. ಈ ಕುರಿತು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದು ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿಲ್ಲ ಎಂದು ತಿಳಿಸಿದರು.