ಬೆಂಗಳೂರು: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ದಿನ ಮಾತ್ರ ಬಾಕಿ ಇರುವಾಗ ಸರ್ಕಾರ ಗಡುವು ವಿಸ್ತರಣೆ ಮಾಡಿದೆ.
ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆ.17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು.
ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದರು.