ನವದೆಹಲಿ: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ. ವಿಭಾಕರ್ ಅವರು ಬುಧವಾರ ಮಧ್ಯಾಹ್ನ ಬಿಜೆಪಿಗೆ ಸೇರುವ ಸಾಧ್ಯತೆಯಿದೆ.
“ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ, ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ.