Advertisements

ಏಪ್ರಿಲ್ 1 ರಿಂದ ಎಪಿಎಲ್, ಬಿಪಿಎಲ್ ಕಾರ್ಡ್ ವಿತರಣೆ

ಬೆಂಗಳೂರು: ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸಚಿವ ಕೆ.ಹೆಚ್ ಮುನಿಯಪ್ಪ, ಏಪ್ರಿಲ್ 1 ರಿಂದ ಎಪಿಎಲ್, ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.

ವಿಧಾನಸಭೆ ಕಲಾಪದಲ್ಲಿ ಶಾಸಕಿ ನಯನಾ ಮೋಟಮ್ಮ ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು ಹಿಂದಿನ ಬಿಜೆಪಿ ಸರ್ಕಾರ 2.95 ಲಕ್ಷ ಕಾರ್ಡುಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿ ದ್ದೇವೆ. ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ಗಳನ್ನು ವಿತರಿಸುವ ತೀರ್ಮಾನ ಕೈಗೊಂಡಿದ್ದೇವೆ ಎಂದರು.

ಏಪ್ರಿಲ್ 1 ರಿಂದ ಎಪಿಎಲ್, ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತದೆ, ಹೊಸ ಕಾರ್ಡುಗಳಿಗೆ ಅರ್ಜಿ ಬಂದರೆ ತಡ ಮಾಡದೆ ಒಂದು ವಾರದೊಳಗೆ ಕಾರ್ಡ್ ವಿತರಣೆ ಮಾಡುವ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.

Leave a Comment

Advertisements

Recent Post

Live Cricket Update