Advertisements

ಮಾಜಿ ದೇವದಾಸಿಯರ ಮಾಸಾಶನ 1,500 ರೂ.ನಿಂದ 2000 ರೂ. ಹೆಚ್ಚಳ

ಬೆಂಗಳೂರು : ಮಾಜಿ ದೇವದಾಸಿಯರ ಮಾಸಾಶನ 1,500 ರೂ.ನಿಂದ 2000 ರೂ.ಹೆಚ್ಚಳ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನ 1,200 ರೂ. ಗಳಿಗೆ ಹೆಚ್ಚಳ ಮಾಡಲಾಗುವುದು. 1,500 ವಿಶೇಷಚೇತನರಿಗೆ ದ್ವಿಚಕ್ರ ವಾಹನ ವಿತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಮಹಿಳೆಯರಿಗೆ ಆರ್ಥಿಕ ಉತ್ತೇಜನ, ಮಹಿಳಾ ಸ್ವಸಹಾಯ ಗುಂಪುಗಳಿಗೆ 10 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.

ವಕ್ಫ್‌ ಆಸ್ತಿಗಳ ಸಂರಕ್ಷಣೆಗೆ 100 ಕೋಟಿ ರೂ. ಮೀಸಲು, 100 ಮೌಲಾನಾ ಅಜಾದ್‌ ವಸತಿ ಶಾಲೆಗಳ ನಿರ್ಮಾಣ ಮಾಡಲಾಗುವುದು, ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ಯಾಚ್ಯುವಿಟಿ ಸೌಲಭ್ಯ ನೀಡಲಾಗು ವುದು, ಅಂಗವಾಡಿ ಕಟ್ಟಡಬಳ ಅಭಿವೃದ್ಧಿಗೆ 300 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Leave a Comment

Advertisements

Recent Post

Live Cricket Update