ಬೆಂಗಳೂರು: ದೇಶವನ್ನು ವಿಭಜನೆ ಮಾಡುತ್ತೇವೆ ಎನ್ನುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬ ಹೇಳಿಕೆ ನೀಡಿದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪಗೆ ರಾಜ್ಯ ಹೈಕೋರ್ಟ್ ಭಾಷೆ ಮೇಲೆ ಹಿಡಿತವಿರಲಿ ಎಂದು ಎಚ್ಚರಿಸಿದೆ.
“ದೇಶವನ್ನು ವಿಭಜನೆ ಮಾಡುತ್ತೇವೆ ಎಂದು ಹೋರಾಡುತ್ತಿರುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎನ್ನುವ ಕಾನೂನು ತನ್ನಿ ಎಂದು ಈಶ್ವರಪ್ಪ ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರನ್ನು ಉದ್ದೇಶಿಸಿ ಹೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ವಿರುದ್ಧ ದಾವಣಗೆರೆ ಎಕ್ಷ್ ಟೆನ್ಷನ್ ಠಾಣೆಯಲ್ಲಿ ದಾಖಲಾಗಿತ್ತು.
ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿ, ನಮ್ಮದು ಬಹುಭಾಷೆ, ಬಹು ಧರ್ಮ ಮತ್ತು ಬಹು ಸಂಸ್ಕೃತಿಗಳ ರಾಷ್ಟ್ರ. ಎಷ್ಟೋ ಕಡೆ ಸ್ವಲ್ಪ ಏನೋ ಮಾತನಾಡಿದರೆ ಬೆಂಕಿ ಹಚ್ಚುವ ಪರಿಸ್ಥಿತಿ ಇದೆ. ಹಾಗಾಗಿ, ಭಾಷಾ ಪ್ರಯೋಗ ಜವಾಬ್ದಾರಿ ಯುತ ವಾಗಿರಬೇಕು. ಸಂಸ್ಕೃತಿ ಬಿಂಬಿತವಾಗುವಂತೆ ಮಾತನಾಡಲು ನಿಮ್ಮ ಕಕ್ಷಿದಾರರಿಗೆ ಹೇಳಿ” ಎಂದು ಕೆ ಎಸ್ ಈಶ್ವರಪ್ಪ ಅವರನ್ನು ಕುರಿತು ಕೋರ್ಟ್ ಮೌಖಿಕವಾಗಿ ಹೇಳಿತು.