Advertisements

ಮೂರನೇ ಟೆಸ್ಟ್: ಯಶಸ್ವಿ ಜೈಸ್ವಾಲ್ ಶತಕ

ರಾಜಕೋಟ್: ಮೂರನೇ ಟೆಸ್ಟ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ.

ಎರಡನೇ ಇನಿಂಗ್ಸ್‌ ಆರಂಭದಿಂದಲೂ ಯಶಸ್ವಿ ಜೈಸ್ವಾಲ್ ಉತ್ತಮ ಪ್ರದರ್ಶನ ತೋರುವ ವಿಶ್ವಾಸ ಮೂಡಿಸಿದ್ದರು. ಈ ಪಂದ್ಯದಲ್ಲಿ ಕೂಡ ರೋಹಿತ್ ಬೇಗನೆ ಔಟ್ ಆದರು. ಇನ್ನಿಂಗ್ಸ್ ಜವಾಬ್ದಾರಿ ವಹಿಸಿಕೊಂಡ ಯಶಸ್ವಿ ಜೈಸ್ವಾಲ್,122 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಟೂರ್ನಿಯಲ್ಲಿ ಜೈಸ್ವಾಲ್ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

ಎರಡನೇ ಟೆಸ್ಟ್ ಪಂದ್ಯದಲ್ಲಿ ಕೂಡ ಜೈಸ್ವಾಲ್ 209 ರನ್ ಗಳನ್ನು ಸಿಡಿಸಿದ ಸಾಧನೆ ಮಾಡಿದ್ದರು. 2023ರಲ್ಲಿ ಟೀಂ ಇಂಡಿಯಾ ಪರ ಟೆಸ್ಟ್‌ಗೆ ಪದಾರ್ಪಣೆ ಮಾಡಿದ ಜೈಸ್ವಾಲ್, ಚೊಚ್ಚಲ ಪಂದ್ಯದಲ್ಲಿಯೇ ಶತಕ ಬಾರಿಸಿದ್ದರು. ಇಲ್ಲಿಯವರೆಗೆ 7 ಟೆಸ್ಟ್ ಪಂದ್ಯಗಳನ್ನಾಡಿರುವ ಜೈಸ್ವಾಲ್, ಮೂರು ಶತಕ ಸೇರಿದಂತೆ 735 ರನ್ ಗಳಿಸಿದ್ದಾರೆ.

ಜೇಮ್ಸ್ ಆಂಡರ್ಸನ್ ಬೌಲಿಂಗ್ ನಲ್ಲಿ ಸಿಕ್ಸರ್, ನಂತರ ಎರಡು ಸತತ ಬೌಂಡರಿಗಳನ್ನು ಬಾರಿಸಿದ ಜೈಸ್ವಾಲ್, ನಂತರ ಟಾಮ್ ಹಾರ್ಟ್ಲಿ ಬೌಲ್ ಮಾಡಿದ 28ನೇ ಓವರ್‌ನಲ್ಲಿ ಎರಡು ಸಿಕ್ಸರ್ ಬಾರಿಸುವ ಮೂಲಕ ಶತಕದ ಹತ್ತಿರ ಬಂದು ನಿಂತರು. ಮಾರ್ಕ್ ವುಡ್ ಬೌಲ್ ಮಾಡಿದ 39ನೇ ಓವರ್ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಶತಕ ಪೂರೈಸಿದರು.

Leave a Comment

Advertisements

Recent Post

Live Cricket Update