Advertisements

ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಇನ್ನಿಲ್ಲ

ನವದೆಹಲಿ : ಸಾಂವಿಧಾನಿಕ ನ್ಯಾಯಶಾಸ್ತ್ರಜ್ಞ ಮತ್ತು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ( 95 )ಅವರು ಬುಧವಾರ ನವದೆಹಲಿ ಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.

ಅವರು ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನ ವಕೀಲರಾಗಿ ಸೇವೆ ಸಲ್ಲಿಸಿದ್ದರು. 1961 ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಅವರು 70 ವರ್ಷಗಳಿಗೂ ಹೆಚ್ಚು ಕಾಲ ಕಾನೂನು ಅಭ್ಯಾಸ ಮಾಡಿದ್ದಾರೆ. ಜಲ ವಿವಾದಗಳ ಪ್ರಕರಣದಲ್ಲಿ ಇವರು ಕರ್ನಾಟಕ ರಾಜ್ಯದ ಪರವಾದ ಮಾಡಿದ್ದರು ಅಲ್ಲದೆ ಕಾವೇರಿಯ ನೀರು ಹಂಚಿಕೆ ವಿವಾದದ ಪ್ರಕರಣಗಳಲ್ಲಿ ರಾಜ್ಯದ ಪರವಾಗಿ ಇವರು ಸುಪ್ರೀಂ ಕೋರ್ಟ್ ನಲ್ಲಿ ವಾದಿಸಿದ್ದರು ಎಂದು ಹೇಳಲಾಗುತ್ತಿದೆ.

ಆರಂಭದಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ಮತ್ತು 1972 ರಿಂದ, ಹೊಸ ದೆಹಲಿಯಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ವಕೀಲರಾಗಿದ್ದರು.ಮೇ 1972 ರಲ್ಲಿ ಅವರು ಬಾಂಬೆಯಿಂದ ದೆಹಲಿಗೆ ಸ್ಥಳಾಂತರಗೊಂಡಾಗ ಅವರು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿದ್ದರು.

Leave a Comment

Advertisements

Recent Post

Live Cricket Update