Advertisements

ಮೃತ ರೈತ ಶುಭಕರನ್ ಸಿಂಗ್ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪಂಜಾಬ್ ಸಿಎಂ

ಚಂಡೀಗಢ: ದೆಹಲಿಯ ಗಡಿಯಲ್ಲಿ ರೈತರು ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಖನೌರಿ ಗಡಿಯ‌ಲ್ಲಿ ಮೃತಪಟ್ಟ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ 1ಕೋಟಿ ಪರಿಹಾರ ಹಾಗೂ ಆತನ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಶುಕ್ರವಾರ ಘೋಷಿಸಿದ್ದಾರೆ.

ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖನೌರಿ ಗಡಿಯಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಬಟಿಂಡಾ ಮೂಲದ ಸಿಂಗ್ (21) ಮೃತಪಟ್ಟಿ ದ್ದರು.

ಘಟನೆಯಲ್ಲಿ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪ್ರತಿಭಟನಾನಿರತ ರೈತರು ಬ್ಯಾರಿಕೇಡ್‌ಗಳತ್ತ ಮುನ್ನುಗ್ಗಲು ಯತ್ನಿಸಿದಾಗ ಘರ್ಷಣೆ ನಡೆದಿತ್ತು. ಅವರನ್ನು ಚದುರಿಸಲು ಹರಿಯಾಣ ಪೊಲೀಸರು ಮೂರು ಸುತ್ತು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದರು. ಇದಕ್ಕೆ ಅವರು ಡ್ರೋನ್‌ ಅನ್ನೂ ಬಳಸಿದರು.

ಖನೌರಿ ಗಡಿಯಲ್ಲಿ ನಡೆದ ರೈತ ಚಳವಳಿಯಲ್ಲಿ ಹುತಾತ್ಮರಾದ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ ಪಂಜಾಬ್ ಸರ್ಕಾರದಿಂದ 1 ಕೋಟಿ ಆರ್ಥಿಕ ನೆರವು ಹಾಗೂ ಅವರ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಮಾನ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Leave a Comment

Advertisements

Recent Post

Live Cricket Update