ಬೆಂಗಳೂರು: ಮಹಿಳೆಯರ ಪ್ರೀಮಿಯರ್ ಲೀಗ್ನ ಎರಡನೇ ಸೀಸನ್ ಫೆ.23 ರಿಂದ ಆರಂಭವಾಗಲಿದೆ. ಲೀಗ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿ ಯನ್ ಮುಂಬೈ ಇಂಡಿಯನ್ಸ್ ಮತ್ತು ಕಳೆದ ಸೀಸನ್ನ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿವೆ.
ಮಹಿಳೆಯರ ಪ್ರೀಮಿಯರ್ ಲೀಗ್ನ ಎರಡನೇ ಸೀಸನ್ ಫೆ.23 ರಿಂದ ಅಂದರೆ ನಾಳೆಯಿಂದ ಆರಂಭವಾಗಲಿದೆ. ಲೀಗ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಕಳೆದ ಸೀಸನ್ನ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿವೆ. ಲೀಗ್ನ ಮೊದಲ ಸೀಸನ್ನ ಫೈನಲ್ ಪಂದ್ಯವು ಈ ಎರಡು ತಂಡಗಳ ನಡುವೆ ನಡೆದಿತ್ತು. ಇದೀಗ ಮತ್ತೊಮ್ಮೆ ಈ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾತ್ರಿ 7.30ಕ್ಕೆ ಪಂದ್ಯ ಆರಂಭ ವಾಗಲಿದೆ. ಇದಕ್ಕೂ ಮುನ್ನ ಬಿಸಿಸಿಐ ವತಿಯಿಂದ ಸಂಜೆ 6.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ.
ಒಟ್ಟು 24 ದಿನಗಳು ಈ ಎರಡನೇ ಸೀಸನ್ ನಡೆಯಲ್ಲಿದ್ದು, ಒಂದು ಟ್ರೋಫಿಗಾಗಿ 5 ತಂಡಗಳು 2 ಸ್ಟೇಡಿಯಂಗಳಲ್ಲಿ 20 ಪಂದ್ಯಗಳನ್ನು ಆಡಲಿವೆ. ನಂತರ ಎಲಿಮಿನೇಟರ್ ಮತ್ತು ಫೈನಲ್ ಪಂದ್ಯಗಳು ನಡೆಯಲಿವೆ. ಒಟ್ಟು 5 ತಂಡಗಳು ಪರಸ್ಪರ 8 ಪಂದ್ಯಗಳನ್ನು ಆಡಲಿವೆ. ಈ ಎಲ್ಲಾ ಪಂದ್ಯಗಳು ನವದೆ ಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ಮತ್ತು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿ ಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಯುಪಿ ವಾರಿಯರ್ಸ್ ಮತ್ತು ಗುಜರಾತ್ ಜೈಂಟ್ಸ್ ಮುಖಾಮುಖಿಯಾಗಲಿವೆ.
ಲೀಗ್ ಪಂದ್ಯಗಳು ಫೆಬ್ರವರಿ 23 ರಿಂದ ಮಾರ್ಚ್ 20 ರವರೆಗೆ ನಡೆಯಲಿವೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣಸಲಿದೆ. ಮಾರ್ಚ್ 20 ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವಿನ ಪಂದ್ಯ ದೊಂದಿಗೆ ಲೀಗ್ ಸುತ್ತು ಮುಕ್ತಾಯಗೊಳ್ಳಲಿದೆ.