Advertisements

ಭೂಸ್ವಾಧೀನಕ್ಕೆ ನೋಟಿಸ್: ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ

ಮೈಸೂರು : ಒಂದೂವರೆ ಎಕರೆ ಜಮೀನನ್ನು ಹೊಂದಿದ್ದ ರೈತನೊಬ್ಬ ಭೂಸ್ವಾಧೀನಕ್ಕೆ ಅರಣ್ಯ ಇಲಾಖೆಯ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಳ್ಳುವ ಭೀತಿಯಿಂದ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕಣಿಯನ್ನ ಹುಂಡಿ ಎಂಬಲ್ಲಿ ನಡೆದಿದೆ.

ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾನೆ. ಆದರೆ ಚಿಕಿತ್ಸೆ ಫಲಿಸದೆ ಗಿರೀಗೌಡ ಎನ್ನುವ ರೈತ ರೈತ ಸಾವನ್ನಪ್ಪಿರುವ ಘಟನೆ ಕಣಿಯನ್ನು ಹುಂಡಿ ಗ್ರಾಮದಲ್ಲಿ ನಡೆದಿದೆ. ರೈತನೊಬ್ಬ ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗುತ್ತಿದೆ.

ಒಂದೂವರೆ ಎಕರೆ ಜಮೀನು ರೈತ ಗಿರಿಗೌಡ ಹೊಂದಿದ್ದ ಎನ್ನಲಾಗುತ್ತಿದೆ. ಭೂಸ್ವಾಧೀನಕ್ಕೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿ ಗಿರಿಗೌಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಆದರೆ ಚಿಕಿತ್ಸೆ ಫಲಿಸದೆ ಕೆಆರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾನೆ.ಎಚ್ ಡಿ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Advertisements

Recent Post

Live Cricket Update