ದಕ್ಷಿಣಕನ್ನಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಒಬ್ಬ ಆಸಿಡ್ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ದುರ್ಘಟನೆ ನಡೆದಿದೆ.
ಕೇರಳ ಮೂಲದ ವ್ಯಕ್ತಿ ಕಡಬ ತಾಲೂಕಿನ ಸರ್ಕಾರಿ ಕಾಲೇಜು ಬಳಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯ್ಯಾರು ಮಾಡಿಕೊಂಡು ಕಾಲೇಜಿನ ವರಾಂಡದಲ್ಲಿ ಕುಳಿತಿದ್ದ ವೇಳೆ ಮುಖಕ್ಕೆ ಕಪ್ಪುಬಣ್ಣದ ಮಾಸ್ಕ್ ಹಾಗೂ ಟೋಪಿ ಧರಿಸಿದ್ದಾ ದುಷ್ಕರ್ಮಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ.
ಅಲಿನಾ, ಸಿಬಿ ಅರ್ಚನಾ, ಹಾಗೂ ಅಮೃತ ಎನ್ನುವ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿಯಾಗಿದೆ.ತಕ್ಷಣ ಕಡಬ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿ ಗಳನ್ನು ದಾಖಲಿಸಿಟಿ ನೀಡಲಾಗುತ್ತಿದೆ. ಆಸಿಡ್ ದಾಳಿ ನಡೆಸಿದ ದುಷ್ಕರ್ಮಿಯನ್ನು ಇದೀಗ ಪೊಲೀಸರು ವಶಪಡಿಸಿಕೊಂಡಿದ್ದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.