Advertisements

ಲೋಕಸಭೆ ಟಿಕೆಟ್ ಹಂಚಿಕೆ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ನಿರ್ಧಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಲೋಕಸಭೆ ಅಭ್ಯರ್ಥಿ ಆಯ್ಕೆ ಸಂಬಂಧ ಸ್ಥಳೀಯ ಮಟ್ಟದಲ್ಲಿ ವಿಚಾರ, ಅಭಿಪ್ರಾಯ ಗಳನ್ನು ಸಂಗ್ರಹಿಸಿ ಹೈಕಮಾಂಡ್ ನಾಯಕರಿಗೆ ಕಳುಹಿಸುವುದು ನಮ್ಮ ಕರ್ತವ್ಯ. ನಾವು ಅದನ್ನು ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಎಲ್ಲಾ ನಾಯಕರ ಅಭಿಪ್ರಾಯ ಸಂಗ್ರಹಿಸಲಾಗಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಉತ್ತರಿಸಿದರು.

ಕಾಂಗ್ರೆಸ್ ಚುನಾವಣೆ ಸಮಿತಿ (ಸಿಇಸಿ) ಸಭೆ ಸೋಮವಾರಕ್ಕೆ ಮುಂದೂಡಿಕೆಯಾಗಿರುವ ಬಗ್ಗೆ ಕೇಳಿ ದಾಗ, “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿದ್ದಾರೆ. ಅವರು ವೈದ್ಯ ರಿಂದ ಸಮಯ ಪಡೆದಿದ್ದ ಕಾರಣ ಇಲ್ಲಿಗೆ ಆಗಮಿಸಿದ್ದಾರೆ ಎಂದರು.

ಬಿಜೆಪಿಯಲ್ಲಿನ ಟಿಕೆಟ್ ಗೊಂದಲದ ಬಗ್ಗೆ ಕೇಳಿದಾಗ, “ಬಿಜೆಪಿ ಪಕ್ಷದ ಟಿಕೆಟ್ ವಿಚಾರವನ್ನು ಅವರ ಪಕ್ಷದವರು ನೋಡಿಕೊಳ್ಳುತ್ತಾರೆ” ಎಂದರು.

ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಬಗ್ಗೆ ಕೇಳಿದಾಗ “ತಡವಾಗಿ ಸುದ್ದಿ ತಿಳಿಯಿತು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಹೀಗಾಗಿ ನಾನು ಪ್ರತ್ರಿಕ್ರಿಯೆ ನೀಡುವುದಿಲ್ಲ. ನಮ್ಮ ಸರ್ಕಾರದಲ್ಲಿ ಸಮರ್ಥ ಗೃಹಮಂತ್ರಿಯಾಗಿ ಪರಮೇಶ್ವರ್ ಅವರು ಇದ್ದಾರೆ. ಅವರು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಈ ವಿಚಾರವಾಗಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ. ಈ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ.” ಎಂದು ಉತ್ತರಿಸಿದರು.

Leave a Comment

Advertisements

Recent Post

Live Cricket Update