Advertisements

ರಾಜ್ಯದಲ್ಲಿ ಕೆಲವೆಡೆ ಗುಡುಗು ಮಿಂಚುಸಹಿತ ಸಾಧಾರಣ ಮಳೆ…!

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಝುಳ ಹೆಚ್ಚಳವಾಗುತ್ತಿರುವ ನಡುವೆಯೂ ಮುಂದಿನ ಒಂದು ವಾರ ಕೆಲವೆಡೆ ಗುಡುಗು ಮಿಂಚುಸಹಿತ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾ.23 ಮತ್ತು ಮಾ.24ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಾ.19ರಿಂದ ಮುಂದಿನ ಮೂರು ದಿನ ಬೀದರ್​ನಲ್ಲಿ ವರ್ಷಧಾರೆ ಯಾಗಲಿದೆ.

ಮಾ.19ರಂದು ಕಲಬುರಗಿ, ಮಾ.21ರಂದು ಕೊಪ್ಪಳ, ರಾಯಚೂರು, ಮಾ.19ರಿಂದ ಮುಂದಿನ ಮೂರು ದಿನ ಕೊಡಗು ಮತ್ತು ಮೈಸೂರಿನಲ್ಲಿ ಸಾಧಾರಣ ಮಳೆ ಬೀಳಲಿದೆ. ಮಾ.22ರಿಂದ ಮುಂದಿನ ಎರಡು ದಿನ ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ವಿಜಯನಗರದಲ್ಲಿ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಕಳೆದ ವರ್ಷ ತೀವ್ರ ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಬರ ಕಾಣಿಸಿಕೊಂಡಿತು. ಉತ್ತಮ ವರ್ಷಧಾರೆಯಾಗಲಿದೆ. ಫೆಸಿಫಿಕ್ ಸಮುದ್ರದ ಪೂರ್ವ ಭಾಗದಲ್ಲಿ ಸಮುದ್ರ ನೀರಿನ ಉಷ್ಣಾಂಶ ವಾಡಿಕೆಗಿಂತ 1 ಡಿಗ್ರಿ ಸೆಲ್ಸಿಯಸ್​ನಿಂದ 1.5 ಡಿಗ್ರಿ ಸೆಲ್ಸಿಯಸ್​ವರೆಗೆ ಹೆಚ್ಚು ದಾಖಲಾದರೆ ಎಲ್ ನಿನೋ ಉಂಟಾಗುತ್ತದೆ. ಕಳೆದ ವರ್ಷ ಎಲ್ ನಿನೋ ಪ್ರಭಾವವು ಮುಂಗಾರು ಮೇಲೆ ಪರಿಣಾಮ ಬೀರಿತ್ತು. ಇದರಿಂದಾಗಿ ರಾಜ್ಯದಲ್ಲಿ ಮಳೆ ಕೊರತೆಯಾಗಿತ್ತು.

ರಾಜ್ಯದಲ್ಲಿ ನಿಧಾನವಾಗಿ ತಾಪಮಾನ ಹೆಚ್ಚುತ್ತಿರುವುದರಿಂದ ಜನರು ತತ್ತರಿಸುವಂತಾಗಿದೆ.

Leave a Comment

Advertisements

Recent Post

Live Cricket Update