ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಗಳಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಇದರಿಂದಾಗಿ ಇಬ್ಬರೂ ನಾಯಕರು ಬಂಧನ ಭೀತಿಯಿಂದ ಪಾರಾಗಿದ್ದಾರೆ. ಬೆಂಗಳೂರಿನ ನಗರ್ತಪೇಟೆಯಲ್ಲಿ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ ಸಮಯ ದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಸಂಬಂಧ ಶೋಭಾ ಕರಂದ್ಲಾಜೆ ಮತ್ತು ಅದೇ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಯಾಗಿದೆ ಎಂದು ಕಾಟನ್ ಪೇಟೆ ಪೊಲೀಸರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೂಡಿದ್ದ ಪ್ರಕರಣದಲ್ಲಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಎರಡೂ ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ರಾಜಕಾರಣಿ ಗಳು ಆಡುವ ಮಾತಿನ ಮೇಲೆ ನಿಗಾ ಇರಬೇಕು ಎಂದು ಆದೇಶಿಸಿದೆ. ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರದಿಂದ, ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ದಿಂದ ಲೋಸಕಭೆ ಚುನಾವಣೆ 2024ರ ಬಿಜೆಪಿ ಅಭ್ಯರ್ಥಿಗಳು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ತಮಿಳುನಾಡಿಗೆ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸ ಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ಕಳೆದ ಕೆಲ ದಿನಗಳ ಹಿಂದೆ ನಗರ್ತಪೇಟೆಯಲ್ಲಿ ನಡೆಸಿದ ಪ್ರತಿಭಟನಾ ವೇಳೆ ತಮಿಳುನಾಡಿನಿಂದ ನಗರಕ್ಕೆ ಬಂದು ಬಾಂಬ್ ಸ್ಪೋಟ ಮಾಡ್ತಾರೆ ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದರು.
ಇದನ್ನು ತೀವ್ರವಾಗಿ ಖಂಡಿಸಿದ್ದ ತಮಿಳುನಾಡು ಸಿಎಂ ಸ್ಟಾಲಿನ್, ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ವಿರೋಧ ವ್ಯಕ್ತವಾಗುತ್ತಿದ್ದಂತೆ ಶೋಭಾ ಕರಂದ್ಲಾಜೆ ಕ್ಷಮೆಯಾಚಿಸಿದ್ದರು.ಈ ಮಧ್ಯೆ, ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು. ಅದರಂತೆ, ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಅದನ್ನು ರದ್ದುಪಡಿಸು ವಂತೆ ಶೋಭಾ ಕರಂದ್ಲಾಜೆ ಹೈಕೋರ್ಟ್ ಮೆಟ್ಟಿಲೇರಿದ್ದರು.