ಚಂಡೀಗಢ: ಐಪಿಎಲ್ 2024ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮತ್ತೊಂದು ರೋಚಕ ಪಂದ್ಯ ನಡೆಯಲಿದೆ. ದಿನದ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಕಳೆದ ವರ್ಷ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಹದಿನಾಲ್ಕು ತಿಂಗಳುಗಳ ಕಾಲ ಕ್ರಿಕೆಟ್‌ನಿಂದ ದೂರವಿದ್ದ ಡೆಲ್ಲಿ ತಂಡದ ನಾಯಕ ಪಂತ್ ಇದೀಗ ಕ್ರಿಕೆಟ್‌ಗೆ ಮರಳಿದ್ದಾರೆ. ರಿಷಭ್ ಪಂತ್, 14 ತಿಂಗಳು ಚೇತರಿಸಿಕೊಂಡ ನಂತರ ಕ್ಯಾಪಿಟಲ್ಸ್ ನಾಯಕನಾಗಿ ಆಡುತ್ತಿದ್ದಾರೆ. ಉಭಯ ತಂಡಗಳು ಕೂಡಾ ಇದುವರೆಗೂ ಟ್ರೋಫಿ ಗೆದ್ದಿಲ್ಲ. ಚೊಚ್ಚಲ ಐಪಿಎಲ್ ಟ್ರೋಫಿಗಾಗಿ ಉಭಯ ತಂಡಗಳು ಪಣ ತೊಟ್ಟಿವೆ, ಮೊದಲ ಗೆಲುವು ಯಾರದ್ದಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.
ದಿನದ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದ್ದು ಪಂದ್ಯ ಈಗಾಗಲೇ ಆರಂಭವಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶಾಯ್ ಹೋಪ್, ರಿಷಭ್ ಪಂತ್(w/c), ರಿಕಿ ಭುಯಿ, ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ಕುಲ್ದೀಪ್ ಯಾದವ್, ಖಲೀಲ್ ಅಹ್ಮದ್, ಇಶಾಂತ್ ಶರ್ಮಾ.
ಪಂಜಾಬ್ ಕಿಂಗ್ಸ್ ಆಡುವ ಬಳಗ : ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋ, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್.