ಬೆಂಗಳೂರು: ಬಿಜೆಪಿ ಪಕ್ಷದಿಂದ ದೂರವಾಗಿ, ಸ್ವಂತ ಪಕ್ಷ ಕಟ್ಟಿ ಆ ಪಕ್ಷದಿಂದಲೇ ಗೆಲುವು ಸಾಧಿಸಿದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿದು ಬಂದಿದೆ. ಹೀಗಾಗಿ, ಜನಾರ್ಧನ ರೆಡ್ಡಿ ಶೀಘ್ರವೇ ಬಿಜೆಪಿ ಸೇರ್ಪಡೆಯಾಗ ಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ಕೆ ಆರ್ ಪಿಪಿ ಪಕ್ಷ ಸ್ಥಾಪಿಸಿ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದು, ಜನಾರ್ಧನ ರೆಡ್ಡಿ ಕಣಕ್ಕೆ ಇಳಿಸಿದ್ದರು. ಗೆಲುವು ಕೂಡ ಸಾಧಿಸಿದ್ದರು. ಇಂತಹ ಅವರು ಲೋಕಸಭಾ ಚುನಾವಣೆಯ ಹೊತ್ತಲ್ಲೇ ಬಿಜೆಪಿ ಸೇರ್ಪಡೆಗೆ ತಯಾರಿ ನಡೆಸಲಾಗಿತ್ತು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದಂತ ಜನಾರ್ಧನ ರೆಡ್ಡಿ ಅವರು, ಅಂತಿಮ ಸುತ್ತಿನ ಮಾತುಕತೆ ನಡೆಸಿದ್ದರು. ಈ ಬಳಿಕ ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹಸಿರು ನಿಶಾನೆ ತೋರಿರೋದಾಗಿ ತಿಳಿದು ಬಂದಿದೆ.
ನಾಳೆ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಶಾಸಕ ಜನಾರ್ಧನ ರೆಡ್ಡಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.