ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಐದನೇ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದ್ದು ದೇಶಾದ್ಯಂತ 80 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆಗೆ ಕ್ಷಣಗಣನೆ ಪ್ರಾರಂಭವಾಗಲಿದೆ.
ಬಾಲಿವುಡ್ ನ ಚಿತ್ರನಟಿ ಕಂಗನಾ ರಾಣಾವತ್ ಕೂಡ ಟಿಕಟ್ ಪಡೆಯಲಿದ್ದಾರೆ ಎನ್ನಲಾಗಿದ್ದು, ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಈ ಬಗ್ಗೆ ಭಾನುವಾರ ಹಿರಿಯ ನಾಯಕರು ಕಲೆತು ಮಹತ್ವದ ಚರ್ಚೆ ನಡೆಸಿದರು. ಬಿಜೆಪಿಯ ಐದನೇ ಪಟ್ಟಿಯಲ್ಲಿ ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ರಾಜಸ್ಥಾನ, ಹರಿಯಾಣಾ, ಹಿಮಾಚಲ ಪ್ರದೇಶ ಮತ್ತು ಆಂಧ್ರಪ್ರದೇಶ ರಾಜ್ಯಗಳನ್ನು ಪ್ರಮುಖವಾಗಿ ಪರಿಗಣಿಸಲಾಗಿದೆ.