ಶ್ರೀನಗರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಮರಿಗೆ ಉರುಳಿ (Accident) ಹತ್ತು ಜನ ಸಾವನ್ನಪ್ಪಿರುವ ಘಟನೆ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
ಕಾರ್ ಶ್ರೀನಗರದಿಂದ (Shrinagar) ಜಮ್ಮುವಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರಿನ ಚಾಲಕ ಜಮ್ಮುವಿನ ಅಂಬ್ ಘೋಥಾದ ಬಲ್ವಾನ್ ಸಿಂಗ್ (47) ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕಮರಿಗೆ ಬಿದ್ದಿದ್ದು, ಕಾರಿನಲ್ಲಿದ್ದ ಹತ್ತೂ ಜನ ಮೃತಪಟ್ಟಿ ದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF), ಮತ್ತು ಸಿವಿಲ್ ಕ್ವಿಕ್ ರೆಸ್ಪಾನ್ಸ್ ಟೀಮ್ (QRT) ರಾಂಬನ್ ನ ತಂಡ ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ರಕ್ಷಣಾ ಕಾರ್ಯವನ್ನು ಕೈಗೊಳ್ಳಲು ಸ್ಥಳಕ್ಕೆ ತಲುಪಿದೆ. ಮಳೆಯ ನಡುವೆಯು ಕಾರ್ಯಾಚರಣೆ ನಡೆಯುತ್ತಿದ್ದು, ಮೃತದೇಹ ಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿಸಿದ್ದಾರೆ.