ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯ ಭಾಗವಾಗಲಿರುವ 27 ಸದಸ್ಯರ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಶನಿವಾರ ಬಿಡುಗಡೆ ಮಾಡಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಮಿತಿಯ ನೇತೃತ್ವ ವಹಿಸಲಿದ್ದು, ನಿರ್ಮಲಾ ಸೀತಾರಾಮನ್ ಅವರನ್ನ ಸಂಚಾಲಕ ರನ್ನಾಗಿ ನೇಮಿಸಲಾಗಿದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಘೋಷಿಸಿದ್ದಾರೆ. ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿ ಈ ಸಮಿತಿಯ ನೇತೃತ್ವ ವಹಿಸಲಿದ್ದಾರೆ.
ಹೆಚ್ಚುವರಿಯಾಗಿ, 27 ಸದಸ್ಯರ ಸಮಿತಿಯು ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಳಗೊಂಡಿದೆ. ಇನ್ನು ವಸುಂಧರಾ ರಾಜೆ ಮತ್ತು ಸ್ಮೃತಿ ಇರಾನಿ ಪಟ್ಟಿಯಲ್ಲಿದ್ದಾರೆ.