Advertisements

ರಿಷಬ್‌ ಪಂತ್‌ಗೆ ₹24 ಲಕ್ಷ ದಂಡ

ವಿಶಾಖಪಟ್ಟಣಂ: ಐಪಿಎಲ್‌ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್‌ ಮಾಡಿದ್ದಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ರಿಷಬ್‌ ಪಂತ್‌ಗೆ ₹24 ಲಕ್ಷ ದಂಡ ವಿಧಿಸಲಾಗಿದೆ.

ನಿಧಾನಗತಿಯ ಬೌಲಿಂಗ್‌ ಕಾರಣಕ್ಕೆ ರಿಷಬ್‌ಗೆ ಇದು ಎರಡನೇ ಬಾರಿ ದಂಡ ವಿಧಿಸುತ್ತಿರುವುದಾಗಿದೆ.

ಕೋಲ್ಕತ್ತ ನೈಟ್‌ ರೈಡರ್ಸ್‌ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್‌ ಮಾಡಿದ್ದಾರೆ ಎಂದು ದಂಡ ವಿಧಿಸಲಾಗಿದೆ. ಅಲ್ಲದೆ, ಉಳಿದ ಆಟಗಾರರಿಗೆ ಅವರ ಪಂದ್ಯ ಶುಲ್ಕದ 25 ಪ್ರತಿಶತ ದಂಡ ವಿಧಿಸಲಾಗಿದೆ ಎಂದು ಐಪಿಎಲ್‌ ಸಂಸ್ಥೆ ಹೇಳಿದೆ.

ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಕೋಲ್ಕತ್ತ ನೈಟ್‌ ರೈಡರ್ಸ್‌ ವಿರುದ್ಧ 106 ರನ್‌ಗಳ ಸೋಲು ಕಂಡಿದೆ.

ಕಳೆದ ಭಾನುವಾರ ನಡೆದ ಚೆನ್ನೈ ಸೂಪರ್‌ಕಿಂಗ್ಸ್‌ ವಿರುದ್ಧದ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್‌ ಮಾಡಿದ್ದಕ್ಕೆ ಪಂತ್‌ಗೆ ₹12 ಲಕ್ಷ ದಂಡ ವಿಧಿಸಲಾಗಿತ್ತು.

Leave a Comment

Advertisements

Recent Post

Live Cricket Update